
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಾರ್ಡ್‌ವೇರ್ ಸಾಗಾಣಿಕೆಯ ಸುಳ್ಳು ದಾಖಲೆ ಇಟ್ಟುಕೊಂಡು ಗೋವಾದಿಂದ ಆಂದ್ರಪ್ರದೇಶಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಂಟೇನರ್ ನ್ನು ಬೆಳಗಾವಿಯ ಯಮಕನಮರ್ಡಿ ಪೊಲೀಸರು ಸೀಜ್ ಮಾಡಿದ್ದಾರೆ.
ನಿನ್ನೆ ರಾತ್ರಿ ಯಮಕನಮರಡಿ ಪೊಲೀಸರು ಲಾರಿಯಲ್ಲಿದ್ದ ಸುಮಾರು 28 ಲಕ್ಷ ಮೌಲ್ಯದ 16,848 ಲೀಟರ್ ವಿವಿಧ ಬಗೆಯ ಮದ್ಯ ವಶಕ್ಕೆ ಪಡೆದು ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಎಸ್ ಪಿ ಭೀಮಾಶಂಕರ ಗುಳೇದ ಅವರು ತಿಳಿಸಿದ್ದಾರೆ
ಕಂಟೇನರ್ ಲಾರಿಯಲ್ಲಿ ಅಕ್ರಮವಾಗಿ ವಿವಿಧ ಬಗೆಯ ದುಬಾರಿ ಬೆಲೆಯ ಮದ್ಯವನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿರುವ ಯಮಕನಮರಡಿ ಪೊಲೀಸರು ಸುಮಾರು 28 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಎಸ್ ಪಿ ಗುಳೇದ ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ