Belagavi NewsBelgaum NewsCrimeKannada NewsKarnataka NewsNational

*ಮೊಬೈಲ್ ಪತ್ತೆಹಚ್ಚಿ ವಾರಸುದಾರರಿಗೆ ಹಿಂದಿರುಗಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆಯು ಸಿಇಐಆರ್ (CEIR) ಪೋರ್ಟಲ್ ಮೂಲಕ ಕಳೆದುಹೋದ ಮೊಬೈಲ್‌ಗಳನ್ನು ಪತ್ತೆಹಚ್ಚುವ ಮೂಲಕ ಮಾಲೀಕರಿಗೆ ಹಸ್ತಾಂತರಿಸಿದೆ. 

ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ, ಅಥಣಿ ವಿಭಾಗದ ಡಿವೈಎಸ್‌ಪಿ ಪ್ರಶಾಂತ ಜಿ. ಮುನ್ನೋಳಿ ಅವರ ಮಾರ್ಗದರ್ಶನದಲ್ಲಿ ಹಾಗೂ ಅಥಣಿ ವೃತ್ತದ ಸಿಪಿಐ ಸಂತೋಷ ಹಳ್ಳೂರ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಿ ಕಳೆದ ಎರಡು ವರ್ಷಗಳಲ್ಲಿ ಕಳೆದುಹೋದ ಮೊಬೈಲ್‌ಗಳನ್ನು ಹಂತ ಹಂತವಾಗಿ ಪತ್ತೆಹಚ್ಚಿ ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ.

ಈ ಬಾರಿ 57 ಕಳೆದುಹೋದ ಮೊಬೈಲ್‌ಗಳನ್ನು ಪತ್ತೆಹಚ್ಚಿ, ಅವುಗಳ ನೈಜ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಇನ್ನೂ ಪತ್ತೆಯಾಗಬೇಕಿರುವ ಕಳೆದುಹೋದ ಮೊಬೈಲ್‌ಗಳನ್ನು ಶೋಧಿಸುವ ಕಾರ್ಯ ನಿರಂತರವಾಗಿ ಮುಂದುವರಿದಿದ್ದು, ಸಾರ್ವಜನಿಕರು ಮೊಬೈಲ್ ಕಳೆದುಹೋದ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಸಿಇಐಆರ್ ಪೋರ್ಟಲ್ ಮೂಲಕ ಮಾಹಿತಿ ನೀಡುವಂತೆ ಬೆಳಗಾವಿ ಪೊಲೀಸರು ಮನವಿ ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button