ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಅಗತ್ಯವಾದ 280 ಕೋಟಿ ರೂ.ಗಳಲ್ಲಿ ಶೇ.50 ಹಣ ನೀಡಲು ರಾಜ್ಯ ಸರಕಾರ ಸಿದ್ಧವಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ರಾಜ್ಯ ತಿಳಿಸಿದೆ.
ಈ ಕುರಿತು ಶುಕ್ರವಾರ ರಾಜ್ಯ ಸರಕಾರ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆದಿದೆ. ಝಾಡ ಶಹಾಪುರದಿಂದ ಬೆನ್ನಳ್ಳಿವರೆಗಿನ 69.25 ಕಿಮೀ ರಿಂಗ್ ರಸ್ತೆ ನಿರ್ಮಾಣಕ್ಕಾಗಿ ಭೂ ಸ್ವಾಧೀನ ಕಾರ್ಯಕ್ಕೆ ಅಂದಾಜು 280 ಕೋಟಿ ರೂ. ಬೇಕಾಗುತ್ತದೆ. ಇದರಲ್ಲಿ ಅರ್ಧದಷ್ಟು, ಅಂದರೆ 140 ಕೋಟಿ ರೂ ನೀಡಲು ರಾಜ್ಯ ಸರಕಾರ ಸಿದ್ಧವಿದೆ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಪ್ರಕ್ರಿಯೆಯನ್ನು ಆರಂಭಿಸುವಂತೆ ಕೋರಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ