ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಂದ ಕಾಮಗಾರಿ ಚಾಲನೆಗೆ ಪೂಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ನಿರಂತರವಾಗಿ ಮುಂದುವರಿದಿದೆ. ಶುಕ್ರವಾರ ಸಂಜೆ ಮತ್ತು ಶನಿವಾರ ಮತ್ತೆ 3 ರಸ್ತೆಗಳ ಅಭಿವೃದ್ಧಿಗೆ ಸ್ಥಳೀಯ ಜನಪ್ರತಿನಿಧಿಗಳು ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಗ್ರಾಮೀಣ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಹರಿದುಬಂದಿದ್ದು, ಕ್ಷೇತ್ರದಲ್ಲಿ ಅಭಿೃದ್ಧಿ ಪರ್ವವೇ ಸಾಗಿದೆ.
ಕ್ಷೇತ್ರದ ಹಿಂಡಲಗಾ ಗ್ರಾಮದ ಕಲ್ಮೇಶ್ವರ ನಗರದಲ್ಲಿ 20 ಲಕ್ಷ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು, ಮೃಣಾಲ ಹೆಬ್ಬಾಳಕರ ಸೇರಿ ಅಧಿಕೃತವಾಗಿ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕ್ಷೇತ್ರದ ಹಿಂಡಲಗಾ ಗ್ರಾಮದ ಶಿವಂ ನಗರದಲ್ಲಿ 20 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಪೂಜೆ ಸಲ್ಲಿಸಿದರು.
ಮೃಣಾಲ ಹೆಬ್ಬಾಳಕರ, ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರದ ಗಣೇಶಪುರ ಗ್ರಾಮದ ಶಿವಾಜಿ ಗಲ್ಲಿಯಲ್ಲಿ 25 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಮೃಣಾಲ ಹೆಬ್ಬಾಳಕರ ಸೇರಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಅಧಿಕೃತವಾಗಿ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ರಾಜೇಶ ನೇಲ್, ಹಲಗೇಕರ್, ರಾಜು ದಂಡಗಲ್ಕರ್, ಬಸನಗೌಡ ಪಾಟೀಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ