ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರ ನಂದು. ನಾನು ತಯಾರು ಮಾಡಿದ ಕ್ಷೇತ್ರ ಅದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಕಾಕ್, ಅರಬಾವಿಯಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನೂ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಗ್ರಾಮೀಣ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ. ಗೋಕಾಕನ್ನು ಬಿಡುವುದಿಲ್ಲ ಎಂದೂ ಹೇಳಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಒಬ್ಬ ಜನಸಾಮಾನ್ಯನನ್ನು ನಿಲ್ಲಿಸಿ ಗೆಲ್ಲಿಸಿಕೊಂಡು ಬರಲಾಗುವುದು ಎಂದು ಅವರು ತಿಳಿಸಿದರು. ಗ್ರಾಮೀಣ ಕ್ಷೇತ್ರದಲ್ಲಿ ಹಾಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸೋಲಿಸುವ ಷಢ್ಯಂತ್ರ ನಡೆಸಿದ್ದೀರಿ ಎನ್ನುವ ಆರೋಪವಿದೆಯಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಷಢ್ಯಂತ್ರವಲ್ಲ, ಅವರನ್ನು ಸೋಲಿಸಿ ನಮ್ಮ ಪಕ್ಷವನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯರನ್ನು ಹೈಜಾಕ್ ಮಾಡುತ್ತೀರಾ ಎಂದು ಪ್ರಶ್ನಿಸಿದಾಗ, ಹೈಜಾಕ್ ಮಾಡಲ್ಲ, ಹೈಜಾಕ್ ಮಾಡುವುದು ಕಾಂಗ್ರೆಸ್ ಸಂಸ್ಕೃತಿ ಎಂದರು.
ರಾಜ್ಯ ಸಚಿವಸಂಪುಟ ವಿಸ್ತರಣೆ ನಾಳೆಯೇ ಆಗಬೇಕು ಎನ್ನುವುದು ನಮ್ಮ ಬೇಡಿಕೆ. ಆದರೆ ಬಿಜೆಪಿಯಲ್ಲಿ ದೇವರು, ಧರ್ಮ, ಸಂಸ್ಕೃತಿ ಎಲ್ಲವನ್ನೂ ನೋಡಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಮುಖ್ಯಮಂತ್ರಿಗಳು, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ರಮೇಶ ಜಾರಕಿಹೊಳಿ ಹೇಳಿದರು.
ಸ್ವಲ್ಪದರಲ್ಲಿ ಪಾರಾದ ಸಚಿವ ಜಗದೀಶ್ ಶೆಟ್ಟರ್
ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಗೆಜೆಟ್ ನೋಟಿಫಿಕೇಶನ್
4 ವರ್ಷದಲ್ಲಿ 7 ಬಾರಿ ವರ್ಗಾವಣೆ: ಡಿ.ರೂಪಾ ಖಾರವಾದ ಟ್ವೀಟ್ ಮಾಡಿದ್ದೇಕೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ