Election NewsKarnataka NewsPolitics

*ಲೋಕಸಭಾ ಚುನಾವಣೆಗೆ ಒಂದು ದಿನ ಬಾಕಿ: ಏಪ್ರಿಲ್ 26ರಂದು ರಾಜ್ಯದಲ್ಲಿ ಯಾವೆಲ್ಲ ಕ್ಷೇತ್ರಗಳಲ್ಲಿ ನಡೆಯಲಿದೆ ಮತದಾನ?*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನವಣೆಯ ಎರಡನೇ ಹಂತದ ಮತದಾನಕ್ಕೆ ಕ್ಷಣ ಗಣನೆ ಆರಂಭವಾಗಿದೆ. ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ.

Home add -Advt

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದ್ದು, ಸಂಜೆ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಈ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಮೇ 7ರಂದು ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯಲಿದ್ದು ಉತ್ತರದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

Related Articles

Back to top button