ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಇಂದಿನಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭವಾಗಿದ್ದು, ಕೆಲ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗಳಿಗೆ ಆಗಮಿಸಿದ್ದರೆ, ಇನ್ನು ಕೆಲ ಶಾಲೆಗಳಲ್ಲಿ ಹಿಜಾಬ್ ಧರಿಸಿ ತರಗತಿಗಳಿಗೆ ಬಂದಿದ್ದಾರೆ.
ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆತಂಕದ ವಾತಾವರಣವಿದ್ದು, ವಿದ್ಯಾರ್ಥಿನಿಯರು ಪೋಷಕರ ಜತೆಯಲ್ಲಿಯೇ ಶಾಲೆಗಳಿಗೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಬುರ್ಕಾ ಹಾಗೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ಸಿಬ್ಬಂದಿ, ಗೇಟ್ ಬಳಿಯೇ ತಡೆದು ಹಿಜಾಬ್ ತೆಗೆದು ತರಗತಿಗಳಿಗೆ ಬರುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಕ್ಲಾಸಿಗೆ ತೆರಳಿದ್ದಾರೆ.
ಕೊಪ್ಪಳ ಹಾಗೂ ಕಲಬುರ್ಗಿಯ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೆ ತರಗತಿಗಳಲ್ಲಿ ಕುಳಿತ ದೃಶ್ಯ ಸಾಮಾನ್ಯವಾಗಿತ್ತು. ಇನ್ನು ಬೆಳಗಾವಿಯ ಸರ್ದಾರ್ ಸರ್ಕಾರಿ ಹೈಸ್ಕೂಲ್ ಗೆ ಹಿಜಾಬ್ ಧರಿಸಿಯೇ ವಿದ್ಯಾರ್ಥಿನಿಯರು ಎಂಟ್ರಿಕೊಟ್ಟಿದ್ದಾರೆ. ಹಿಜಾಬ್ ತೆಗೆದು ಹೋಗುವಂತೆ ಸಿಬ್ಬಂದಿಗಳು ಸೂಚಿಸಿದರೂ ಕೇಳದ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲ್ಲ, ಬೇಕಾದರೆ ಮಾಸ್ಕ್ ತೆಗೆಯುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಬಳಿಕ ಹಿಜಾಬ್ ಧರಿಸಿಯೇ ತರಗತಿಗಳಿಗೆ ಹಾಜರಾಗಿದ್ದಾರೆ.
ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭ; ಪೊಲೀಸ್ ಬಿಗಿ ಭದ್ರತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ