Belagavi NewsBelgaum NewsKannada NewsKarnataka NewsLatest
ಬೆಳಗಾವಿ : ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಸಾವಿರಾರು ಮಹಿಳೆಯರಿಗೆ ವಂಚನೆ; ಮಹಿಳೆ ವಿರುದ್ಧ FIR
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಮಹಿಳೆ ಯಲ್ಲವ್ವ ಬನ್ನಿಬಾಗ್ ಮನೆಗೆ ನೂರಾರು ಮಹಿಳೆಯರು ಮುತ್ತಿಗೆ ಹಾಕಿದ್ದಾರೆ.
ಬೆಳಗಾವಿ ತಾಲೂಕಿನ ಹಾಲಬಾವಿಯ ಮಹಿಳೆ ಯಲ್ಲವ್ವ ಬನ್ನಿಬಾಗ ಕೊಟಿ ಕೋಟಿ ವಂಚಿಸಿರುವುದಾಗಿ ಆರೋಪಿಸಲಾಗಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯರ ಹೆಸರಿನಲ್ಲಿ ತಲಾ 50 ಸಾವಿರ ರೂ. ಸಾಲ ಪಡೆದು ತಾನು ತಲಾ 25 ಸಾವಿರ ರೂ. ಇಟ್ಟುಕೊಳ್ಳುತ್ತಿದ್ದಳು ಎಂದು ದೂರಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ