Latest

20,88,612ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 61,537 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,88,612ಕ್ಕೆ ಏರಿಕೆಯಾಗಿದೆ.

ಒಂದೇ ದಿನ 933 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ 6,19,088 ಸಕ್ರಿಯ ಪ್ರಕರಣಗಳಿದ್ದು, 14,27,006 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದೂವರೆಗೂ 42,518 ಮಂದಿ ಕೊರೊನಾ ವೈರಸ್‍ಗೆ ಸಾವನ್ನಪ್ಪಿದ್ದಾರೆ.

Home add -Advt

ಇನ್ನು ದೇಶದಲ್ಲಿ ಗುಣಮುಖರಾದವರ ಪ್ರಮಾಣ ಕೂಡ ಏರಿಕೆಯಾಗಿದ್ದು, ಪ್ರಸ್ತುತ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.68.32ಕ್ಕೆ ಏರಿಕೆಯಾಗಿದೆ.

Related Articles

Back to top button