ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲಾ ಪಂಚಾಯತ, ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ನಗರದಲ್ಲಿ ಮತದಾನ ಜಾಗೃತಿಗಾಗಿ ಪೂರ್ಣಕುಂಭ ಹಾಗೂ ಕಾಲ್ನಡಿಗೆ ಜಾಥಾ ನಡೆಸಲಾಯಿತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೊಯರ್ ಅವರು ಎಲ್ ಐಸಿ ಕಚೇರಿ ಆವರಣದಲ್ಲಿ ರವಿವಾರ (ಮೇ 7) ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
“ನನ್ನ ಮತ ಮಾರಾಟಕಿಲ್ಲ” , ಮತದಾನದಿಂದ ವಂಚಿತರಾಗಬೇಡಿ, ನಮ್ಮ ಮತ ನಮ್ಮ ಹಕ್ಕು, ಆಮಿಷಕ್ಕೆ ಮರುಳಾಗದಿರಿ ಯೋಚಿಸಿ ಮತ ಚಲಾಯಿಸಿ, ಆಮಿಷಗಳನ್ನು ನಿರಾಕರಿಸಿ ನಿಮ್ಮಷ್ಟದಂತೆ ಚಲಾಯಿಸಿ, ಪ್ರತಿ ಮತವು ಅಮೂಲ್ಯ ತಪ್ಪದೇ ಮತ ಚಲಾಯಿಸಿ ಎಂದು ವಿವಿಧ ಮತಜಾಗೃತಿ ಘೋಷಣೆಗಳನ್ನು ಕೂಗುವುದರ ಮುಖಾಂತರ ಸಾರ್ವಜನಿಕರಲ್ಲಿ ಮತಜಾಗೃತಿ ಮೂಡಿಸಲಾಯಿತು.
ಕುಂಭಮೇಳ ಜಾಥಾ ಕಾರ್ಯಕ್ರಮವು ನಗರದ ಎಲ್ ಐಸಿಕಚೇರಿಯಿಂದ ಪ್ರಾರಂಭವಾಗಿ ರಾಣಿಚೆನ್ನಮ್ಮ ವೃತ್ತವರೆಗೆ ನಡೆಯಿತು. ಮತದಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ರವಿ ಬಂಗಾರೆಪ್ಪನವರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಬಸರಾಜ ಎನ್., ಜಿಲ್ಲಾ ಐಇಸಿ ಸಂಯೋಜಕ ಪ್ರಮೋದ ಗೋಡೆಕರ, ಜಿಲ್ಲಾ ಎಸ್ ಬಿಎಂ ಸಮಾಲೋಚಕ ಬಾಹುಬಲಿ ಮೆಳವಂಕಿ, ತಾಲ್ಲೂಕು ಐಇಸಿ ಸಂಯೋಜಕ ರಮೇಶ ಮಾದರ ಹಾಗೂ ಜಿಲ್ಲೆಯ ವಿಶೇಷ ಚೇತನರು ಭಾಗಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ