*ಯುಪಿಎಸ್ಸಿಯಲ್ಲಿ 910ನೇ ರ್ಯಾಂಕ್ ಪಡೆದ ಬೆಳಗಾವಿ ಯುವಕ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ‌ ಮೆರೆದಿದ್ದಾರೆ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ್ಯಾಂಕ್ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಯುಪಿಎಸ್ಸಿಯಲ್ಲಿ ಮಗ ಪಾಸ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕೊಡ್ಲಿವಾಡದ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಪ್ಪ ಯಲ್ಲಪ್ಪ, ಅವ್ವ ಕಾಳವ್ವ, ಪತ್ನಿ ಯಶೋಧಾ, ಸಹೋದರ ಆನಂದ ಸೇರಿ ಕುಟುಂಬಸ್ಥರ ಸಂತಸಕ್ಕೆ ಪಾರವೇ ಇಲ್ಲ. … Continue reading *ಯುಪಿಎಸ್ಸಿಯಲ್ಲಿ 910ನೇ ರ್ಯಾಂಕ್ ಪಡೆದ ಬೆಳಗಾವಿ ಯುವಕ*