Belagavi NewsBelgaum NewsKannada NewsKarnataka NewsLatest

*ಯುಪಿಎಸ್‌ಸಿಯಲ್ಲಿ ಬೆಳಗಾವಿ ಯುವಕನ ಕಮಾಲ್: ರಾಜ್ಯಕ್ಕೆ ಮೊದಲ ರ‍್ಯಾಂಕ್ *

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯುಪಿಎಸ್‌ಸಿ 2025ನೇ ಸಾಲಿನ ಸಿವಿಲ್ ಸರ್ವೀಸ್ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ರಾಜ್ಯಕ್ಕೆ ಮೊದಲ ಹಾಗೂ ದೇಶಕ್ಕೆ 53ನೇ ರ‍್ಯಾಂಕ್  ಪಡೆಯುವ ಮೂಲಕ ಬೆಳಗಾವಿ ಯುವಕ ಸಾಧನೆ ಮಾಡಿದ್ದಾನೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರವಾಟ ಗ್ರಾಮದ ಕಿರಣ ಕಮತೆ (29) ಎಂಬ ಯುವಕ ಯುಪಿಎಸ್ ಸಿ ಪರೀಕ್ಷೆ ಪಾಸ್ ಆಗುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. 

ಕಿರಣ ಕಮತೆ, ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿ‌ನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಕಿರಣ ತಂದೆ ಡಾ. ಸಣ್ಣಪ್ಪ ಕಮತೆ ನಿಡಸೋಸಿಯ ಹೀರಾ ಶುಗರ್ಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದಾರೆ‌. ತಾಯಿ ರುಕ್ಮಿಣಿ ಗೃಹಿಣಿ ಆಗಿದ್ದಾರೆ. ಸಹೋದರಿ ಕೀರ್ತಿ ಬೆಂಗಳೂರಿನಲ್ಲಿ ಆರ್ಕಿಟೆಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ‌.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button