Kannada NewsKarnataka News

*ಬೆಳ್ಳಂ ಬೆಳಗ್ಗೆ ಅಪಘಾತ: ಇಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ: ಆಟೋ ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತವೊಂದರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ನಲ್ಲೂರು ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ. 

ಚಂದ್ರಶೇಖರ್ (38) ಹಾಗೂ ರಾಘವೇಂದ್ರ (40) ಮೃತ ದುರ್ದೈವಿಗಳಾಗಿದ್ದಾರೆ. ಮೂಡಿಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಂದ್ರಶೇಖ‌ರ್ ಅವರು ಚಲಾಯಿಸುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿತ್ತು. ಇದರಿಂದ ಆಟೋ ಉರುಳಿ ಬಿದ್ದು ಅಪಘಾತವುಂಟಾಗಿತ್ತು. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಸ್ಥಳೀಯರು ಪ್ರಯತ್ನಿಸಿದರಾದರೂ ಜೀವ ಉಳಿಸುವಲ್ಲಿ ವಿಫಲವಾಗಿದ್ದಾರೆ.

ಚಿಕ್ಕಮಗಳೂರಿನ ಸ್ಥಳೀಯ ಠಾಣೆಯ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಬಸ್‌ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮೃತ ದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button