
ಪ್ರಗತಿವಾಹಿನಿ ಸುದ್ದಿ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ.
ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದ ಈ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪೌಲ್ಟಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಗೌಡ (30) ಮತ್ತು ಸಭ್ಯ (29) ಎಂದು ಗುರುತಿಸಲಾಗಿದೆ.
ಬೆಳಗ್ಗೆ ಎಂದಿನಂತೆ ಕೆಲಸಕ್ಕೆಂದು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಕೆ. ಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ನೆಲಕ್ಕೆ ಬಿದ್ದ ಅಭಿಷೇಕ್ ಹಾಗೂ ಸಭ್ಯ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೇತಮಂಗಲ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.