
ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಅಪಘಾತ ಸಂಭವಿಸಿ ಒಂದೆ ಕುಟುಂಬದ ಆರು ಜನ ಸೇರಿ 7 ಪ್ರಯಾಣಿಕರು ಸಾವನಪ್ಪಿರುವ ಘಟನೆ ನಡೆದಿದೆ.
ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾದಿಂದ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಕೈಗೊಂಡಿದ್ದಾರೆ.

