
ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಬಳ್ಳಾರಿಯ ಎಎಸ್ಎಂ ಮಹಿಳಾ ಕಾಲೆಜು ಪ್ರಾಂಶುಪಾಲರ ವಿರುದ್ಧ ಉಪನ್ಯಾಸಕಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ.
ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘದ ಎಎಸ್ಎಂ ಮಹಿಳಾ ಕಾಲೇಜು ಪ್ರಾಂಶುಪಾಲ ಶರಣಪ್ಪ ವಿರುದ್ಧ ಉಪನ್ಯಾಸಕಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಾಂಶುಪಾಲರ ವಿರುದ್ಧ ಮೊದಲು ಉಪನ್ಯಾಸಕಿ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದರು. ಆದರೆ ಆಡಳಿತ ಮಂಡಳಿ ಪ್ರಾಂಶುಪಾಲರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಉಪನ್ಯಾಸಕಿ ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಾಂಶುಪಾಲ ಶರಣಪ್ಪ ಈ ತಿಂಗಳು ನಿವೃತ್ತಿಯಾಗಲಿದ್ದು, ಇದೇ ಸಂದರ್ಭದಲ್ಲಿ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.
https://pragati.taskdun.com/ashwatatanarayanareactionguarantee-scheme/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ