ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದೆ.
ವಿಧಾನಸೌಧದಲ್ಲಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಅತ್ಯಂತ ದು:ಖಕರ. ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.
ಕಂಪನಿಯಿಂದಲೂ ಪರಿಹಾರ ನೀಡಲು ಸೂಚಿಸಲಾಗಿದೆ. ಆಸ್ಪತ್ರೆ ಎಂಡಿಗೆ ನೋಟಿಸ್ ನೀಡಲು ಸೂಚಿಸಿದ್ದೇನೆ. ಬಳ್ಳಾರಿ ಜಿಲ್ಲಾ ಔಷಧಿ ನಿಯಂತ್ರಕನನ್ನು ಅಮಾನತು ಮಾಡಲಾಗಿದೆ. ಪಶ್ಚಿಮ ಬಂಗಾಳ ಮೂಲದ ಕಂಪನಿಯನ್ನು ಬ್ಲ್ಯಾಕ್ ಲಿಸ್ಟ್ ಗೆ ಸೇರಿಸಲಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ