Kannada NewsKarnataka NewsPolitics

*ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದ ಬಳ್ಳಾರಿ ಶಾಸಕ ಭರತ್ ರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ತೋರಣಗಲ್ ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಶಾಸಕ ಭರತ್ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು. 

ಇದಕ್ಕೂ ಮುನ್ನ ಮುಖ್ಯಮಂತ್ರಿಯವರು ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಡಿಜಿಪಿ ಹಿತೇಂದ್ರ, ಬಳ್ಳಾರಿ ವಲಯದ ಐಜಿ ವರ್ತಿಕಾ ಕಟಿಯಾರ್ ಹಾಗೂ ದಾವಣಗೆರೆ  ವಲಯದ ಐಜಿ ರವಿಕಾಂತೇಗೌಡ ಅವರಿಂದಲೂ ಘಟನೆ ಕುರಿತು ಮಾಹಿತಿ ಪಡೆದುಕೊಂಡರು.

ಮುಖ್ಯಮಂತ್ರಿಯವರು ಸಿಂಧನೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿ ಬಳಿಕ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

Home add -Advt

Related Articles

Back to top button