*ಬಳ್ಳಾರಿ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ, ಬಳ್ಳಾರಿ : ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದ. ಇದಕ್ಕೆ ಸಂಬಂಧಪಟ್ಟಂತೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ್ದ ದೂರಿನ ಆಧಾರದ ಮೇಲೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ನಾರಾ ಸೂರ್ಯನಾರಾಯಣ ರೆಡ್ಡಿ ಸೇರಿ ಹಲವರ ಹೆಸರನ್ನು ಎಫ್ ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಶಾಸಕ ಜನಾರ್ದನರೆಡ್ಡಿ, ಬಳ್ಳಾರಿಯಲ್ಲಿ ನಿನ್ನೆ ಜನಾರ್ದನ ರೆಡ್ಡಿ ಮನೆ ಮುಂದೆ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟು ವೇಳೆ ಜನಾರ್ಧನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದರು.
ನೆನ್ನೆ ಸಂಜೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ದೂರು ನೀಡಲಾಗಿತ್ತು. ಶಾಸಕ ಜನಾರ್ದನರೆಡ್ಡಿ ಹಲ್ಲೆ, ಕೊಲೆ ಯತ್ನ ಆರೋಪದಡಿ ದೂರು ನೀಡಿದರು.
ಮತ್ತೊಂದಡೆ ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪದಡಿ ಬಿಜೆಪಿ ಕಾರ್ಯಕರ್ತ ನಾಗರಾಜ್ ಕೂಡ ನೀಡಿದರು. ಎಎಸ್‌ಪಿ ರವಿಕುಮಾರ್ ದೂರ ಸ್ವೀಕರಿಸಿದ್ದು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ.
ನಿನ್ನೆ ಬಳ್ಳಾರಿಯಲ್ಲಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟು ಹನ್ನೆರಡು ಜನರು ಗಾಯಗೊಂಡಿದ್ದಾರೆ. ಎರಡು ಕಡೆಯ ವ್ಯಕ್ತಿಗಳಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರು ಪೊಲೀಸರ ಮೇಲೂ ಕಲ್ಲಿನ ದಾಳಿಯಾಗಿದೆ.



