ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.
ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ಐಸಿಯುಗೆ ದಾಖಲಾಗಿದ್ದ ಮೂವರು ರೋಗಿಗಳು ನಿನ್ನೆ ರಾತ್ರಿ ಸಾವನ್ನಪ್ಪಿದ್ದರು. ಇದೀಗ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ. ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಪ್ರಕರಣದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅಲ್ಲದೇ ರಾಜ್ಯ ಸರ್ಕಾರ ಮೃತರ ಕುಟುಬಕ್ಕೆ 25 ಲಕ್ಷ ಪರಿಹಾರ ನೀಡಬೇಕು ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದರು.
ವಿಮ್ಸ್ ಆಸ್ಪತ್ರೆಯಲ್ಲಿ 3 ರೋಗಿಗಳ ದಾರುಣ ಸಾವು ಪ್ರಕರಣ; ನಿರ್ದೇಶಕ ಡಾ.ಗಂಗಾಧರ್ ಹೇಳಿದ್ದೇನು?
https://pragati.taskdun.com/latest/https-pragativahini-com-world-world-cities-millionaires-places-henlyandpartners-group-report/
ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು ಪ್ರಕರಣ; ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ
https://pragati.taskdun.com/latest/vims-hospital-casedr-sudhakarhigh-level-committee/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ