
ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಔಷಧಿಯ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ರಾತ್ರಿ ಈ ಘಟನೆ ನಡೆದಿದೆ. ಕರಿಬಸವಯ್ಯ ಹಾಗೂ ನಿಂಗಮ್ಮ ಅವರ 9 ತಿಂಗಳ ಮಗು ಭಾರತಿ ಆಟವಾಡುತ್ತಾ ಡಬ್ಬಿಯನ್ನು ನುಂಗಿದ್ದು, ಅದು ಗಂಟಲಲ್ಲಿ ಸಿಲುಕಿ ಮೃತಪಟ್ಟಿದ್ದಾಳೆ.
ರಾತ್ರಿ ಮಗುವಿನ ತಾಯಿ ಮನೆಯ ಕೆಲಸ ಮಾಡುತ್ತಿರುವಾಗ ಮನೆಯ ಮುಂದೆ ಮಕ್ಕಳೊಂದಿಗೆ ಮಗು ಆಟವಾಡುತ್ತಿತ್ತು. ಈ ವೇಳೆ ಔಷಧಿ ಡಬ್ಬಿಯನ್ನು ಮಗು ನುಂಗಿ ನರಳಾಡಲು ಆರಂಭಿಸಿದೆ.
ತಕ್ಷಣವೇ ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲು ಪೋಷಕರು ಮುಂದಾದಾಗ ಮಾರ್ಗ ಮಧ್ಯದಲ್ಲೇ ಮಗು ಸಾವನ್ನಪ್ಪಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ