
ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಜತೆ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮಹಾಮಾರಿ ಕೊರೊನಾ ಸೋಂಕಿಗೆ ಎಂಟು ಜನ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 22ಕ್ಕೇರಿಯಾಗಿದೆ.
ಆಂಧ್ರಪ್ರದೇಶ ಮೂಲದ ಕರ್ನೂಲ್ ಜಿಲ್ಲೆಯ ಆದೋನಿಯ 52 ವರ್ಷದ ಮಹಿಳೆ, ಕೊಪ್ಪಳ ಜಿಲ್ಲೆಯ ರಂಗಾಪುರ ಕ್ಯಾಂಪಿನ 43 ವರ್ಷದ ಪುರುಷ, ಹೊಸಪೇಟೆ ತಾಲೂಕಿನ ಧರ್ಮಸಾಗರದ 56 ವರ್ಷ ವಯೋಮಾನದ ಪುರುಷ, ಹೊಸಪೇಟೆಯ ಆಜಾದ ನಗರದ 66 ವರ್ಷದ ಪುರುಷ ಸೇರಿದಂತೆ ಇಂದು ಎಂಟು ಮಂದಿ ಸಾವನ್ನಪ್ಪಿದ್ದಾರೆಂದು ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ತಿಳಿಸಿದ್ದಾರೆ.
ಉಸಿರಾಟದ ತೊಂದರೆ, ಜ್ವರ ಮತ್ತು ಕೆಮ್ಮು- ನೆಗಡಿಯಿಂದ ಬಳಲುತ್ತಿದ್ದ ಎಂಟು ಜನರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಸೋಂಕಿರುವುದು ದೃಢ ಪಟ್ಟಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.