ಟ್ರ್ಯಾಕ್ಟರ್ ಪಲ್ಟಿಯಾಗಿ ಒಂದೇ ಕುಟುಂಬದ ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಹಿರೇಹಡಗಲಿ ಪೊಲೀಸ್ ಠಾಣೆವ್ಯಾಪ್ತಿಯ ಕತ್ತೆಬೆನ್ನೂರು ಗ್ರಾಮದ ಬಳಿ ನಡೆದಿದೆ.

ಮೃತಪಟ್ಟವರನ್ನು ದಾಸಹನಹಳ್ಳಿ ಮೂಲದ ಅಂಗಡಿ ಗೀತಾ(40), ಸೊಪ್ಪನ ಸುನಿತಾ(30), ವೀರಣ್ಣ ಜಕ್ಕಣ್ಣನವರ(35), ಹೆಗ್ಗಜ್ಜರ ಕಾಳಮ್ಮ(50) ಎಂದು ಗುರುತಿಸಲಾಗಿದೆ. ಗಂಭಿರ ಗಾಯಗೊಂಡ 7 ಮಂದಿಯನ್ನು ಹೂವಿನಹಡಗಲಿ ಮತ್ತು ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಭೀರಬ್ಬಿ ಗ್ರಾಮದಲ್ಲಿ ಸಂಬಂಧಿಕರ ಮದುವೆ ಮುಗಿಸಿಕೊಂಡು ವಾಪಸ್ ದಾಸಹನಹಳ್ಳಿಗೆ ತೆರಳುವಾಗ ಟ್ರ್ಯಾಕ್ಟರ್ ಆಯತಪ್ಪಿಬಿದ್ದು ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸಿಪಿಐ ಮಾಲತೇಶ್ ಕೂನಬೇವು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button