Latest

ದೇವರ ಅನುಗ್ರಹ ಇದ್ದರೆ ಸಚಿವನಾಗುತ್ತೇನೆ

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ನನಗೆ ಸಚಿವ ಸ್ಥಾನ ನೀಡಿ ಎಂದು ನಾನು ಕೇಳಿಲ್ಲ, ನಾನು ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ. ಆಂಜನೇಯ ಸ್ವಾಮಿ ಅನುಗ್ರಹ ನೀಡಿದಾಗ ನಾನು ಮಂತ್ರಿಯಾಗುತ್ತೇನೆ ಎಂದು ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ದೇವರ ಅನುಗ್ರಹ ಇದ್ದರೆ ಮಂತ್ರಿಯಾಗುತ್ತೇನೆ. ಇನ್ನು ಪಕ್ಷವೇ ನನಗೆ ಸಚಿವ ಸ್ಥಾನ ನೀಡಿದರೆ ಆಗುತ್ತೇನೆ ಎಂದು ಹೇಳಿದರು.

ಮಂತ್ರಿ ಸ್ಥಾನಕ್ಕಾಗಿ ನಾನು ಯಾವತ್ತೂ ಬೇಡಿಕೆ ಇಟ್ಟಿಲ್ಲ. ಸಚಿವ ಆನಂದ್ ಸಿಂಗ್ ನನ್ನ ಸಹೋದರ ರೀತಿ ಇದ್ದಾರೆ. ಹೀಗಿರುವಾಗ ನನಗೆ ಸಚಿವ ಸ್ಥಾನದ ಅಗತ್ಯವಿಲ್ಲ ಎಂದರು.

ಇದೇ ವೇಳೆ ಮಾತನಾಡಿದ ಸಚಿವ ಆನಂದ್ ಸಿಂಗ್, ಸಚಿವ ಸಂಪುಟ ವಿಸ್ತರಣೆ ಒಂದೇ ವಿಚಾರವಾಗಿ ಸಿಎಂ ಯಡಿಯೂರಪ್ಪ ದೆಹಲಿಗೆ ಹೋಗಿಲ್ಲ. ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ, ಕೆಲ ಯೋಜನೆಗಳ ಜಾರಿ ಹೀಗೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚಿಸಲು ಹೋಗಿದ್ದಾರೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button