Latest

ಮತ್ತೋರ್ವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯಲ್ಲಿ ಕೊವಿಡ್ ಪಾಸಿಟೀವ್

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಇದರಿಂದಾಗಿ ಆತನ ಜೊತೆಗೆ ಪರೀಕ್ಷೆ ಬರೆದ ಮಕ್ಕಳಲ್ಲಿ ಆತಂಕ ಹೆಚ್ಚಾಗಿದೆ.

ಜೂನ್ 25 ರಂದು ಪರೀಕ್ಷೆ ಬರೆದು ಬೈಕಿನಲ್ಲಿ ವಿದ್ಯಾರ್ಥಿಗಳು ತೆರಳುವಾಗ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಬ್ಬರಲ್ಲಿ ಒಬ್ಬನಿಗೆ ಸೋಂಕು ತಗುಲಿರೋದು ಇದೀಗ ದೃಢ ಪಟ್ಟಿದೆ.

ಕೊರೊನಾ ಸೋಂಕಿತ ವಿದ್ಯಾರ್ಥಿಯನ್ನು ಬಳ್ಳಾರಿ ತಾಲೂಕಿನ ಕಪಗಲ್ ಗ್ರಾಮದವನು ಎಂದು ತಿಳಿದು ಬಂದಿದೆ. ಸೋಂಕಿತ ವಿದ್ಯಾರ್ಥಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Related Articles

Back to top button