
ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆ ನಿರ್ದೇಶಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ವಿಮ್ಸ್ ನಿರ್ದೇಶಕ ಗಂಗಾಧರ್ ಗೌಡ ವಿರುದ್ಧ ಬಳ್ಳಾರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಮ್ಸ್ ಟ್ರಾಮಾ ಕೇರ್ ಸೆಂಟರ್ ನಲ್ಲಿ ಸಿಸ್ಟಮ್ ಇಂಜಿನಿಯರ್ ಆಗಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನೇಮಕಾತಿ ಆದೇಶ ಪ್ರತಿ ಪಡೆಯಲು ಹೋದಾಗ ಗಂಗಾಧರ್ ಗೌಡ ಕೈ ಚಾಚಿ ತಬ್ಬಿಕೊಳ್ಳಲು ಬಂದಿದ್ದರು. ಸಹಕರಿಸದಿದ್ದಕ್ಕೆ ಕೆಲಸದಿಂದ ತೆಗೆಯಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಮ್ಸ್ ನಿರ್ದೇಶಕ ಗಂಗಾಧರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ