*ಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸಾರ್ವಜನಿಕರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಕಿಡಿಗೇಡಿಗಳು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿ ನಡೆದಿದೆ.
ಇಲ್ಲಿನ ಪುರಸಭೆ ಗಣಪತಿ, ಶ್ರೀ ವರಸಿದ್ಧಿ ವಿನಾಯಕ ದೇಗುಲ ಎಂದರೆ ಪ್ರಸಿದ್ಧವಾದ ಗಣಪತಿ. ಕಿಡಿಗೇಡಿಗಳ್ಯಾರೋ ಗಣಪತಿ ದೇವರಿಗೆ ಎರಡು ಚಪ್ಪಲಿ ಇಟ್ಟಿದ್ದಾರೆ. ಇಂದು ಬೆಳಿಗ್ಗೆ ಭಕ್ತರು ದೇವಸ್ಥಾನಕ್ಕೆ ಬಂದಾಗ ಗಣಪತಿ ಮೂರ್ತಿ ಮೇಲಿರುವ ಚಪ್ಪಲಿ ಕಂಡು ಆಘಾತಗೊಂಡಿದ್ದಾರೆ. ಇದೆಂತಹ ಅಪಚಾರ. ದೇವರಿಗೆ ಚಪ್ಪಲಿ ಇಟ್ಟು ಹೊಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ಹಾಗೂ ಸಾರ್ವಜನಿಕರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದು, ಗಣಪತಿ ಮೂರ್ತಿ ಮೇಲೆ ಚಪ್ಪಲಿ ಇಟ್ಟಿರುವ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದದರೆ. ಘಟನಾ ಸ್ಥಳಕ್ಕೆ ಎಸ್ ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿದ್ದು, ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ದುಷ್ಕೃತ್ಯ ನಡೆಸಿದವರನ್ನು ಬಂಧಿಸಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.