Politics

*ಅಂದು ಕುಮಾರಸ್ವಾಮಿ ರಾಜೀನಾಮೆ ಕೊಟ್ಟಿದ್ರಾ? ಮೊದಲು ಮೋದಿ, ಶಾ ರಾಜೀನಾಮೆ ಕೊಡಿಸಲಿ ಎಂದ ಬೇಳೂರು ಗೋಪಾಲಕೃಷ್ಣ*

ಪ್ರಗತಿವಾಹಿನಿ ಸುದ್ದಿ: ಕಾಲ್ತುಳಿತ ದುರಂತದಲ್ಲಿ 11ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಅಂದು ಡಾ. ರಾಜ್ ಕುಮಾರ್ ತೀರಿಕೊಂಡಾಗ ಕಂಠೀರವ ಸ್ಟುಡಿಯೋದಲ್ಲಿ ನಾನೂ ಇದ್ದೆ. ನಾಲ್ಕು ಜನರಿಗೆ ಗುಂಡು ಹೊಡೆಸಿದ್ದರು. ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ತಿದ್ರಾ? ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿಸಿದರು. ಅಂದು ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ರಾ? ಎಂದು ಪ್ರಶ್ನಿಸಿದ್ದಾರೆ.

ಅಷ್ಟೇ ಯಾಕೆ ಪಹಲ್ಗಾಮ್ ಉಗ್ರರ ದಾಳಿಯಲ್ಲಿ 26 ಜನರು ಸತ್ತರು. ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ ಹಲವರು ಮೃತಪಟ್ಟಿದ್ದಾರೆ. ಇಷ್ಟಾದರೂ ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆ ಕೊಟ್ರಾ?ಅವರ ರಾಜೀನಾಮೆ ಕೊಡಿಸಲಿ. ನಂತರ ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸುತ್ತೇವೆ ಎಂದರು.

ಇಂತಹ ಘಟನೆ ಆಗಬಾರದಿತ್ತು, ಆಗಿ ಹೋಗಿದೆ. ಆಕಸ್ಮಿಕವಾಗಿ ನಡೆದಿರುವ ಘಟನೆ. ಈ ಬಗ್ಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ. ನಮಗೂ ಕೂಡ ನೋವಿದೆ. ದುರಂತದ ಬಗ್ಗೆ ಅನಗತ್ಯವಾಗಿ ಗೊಂದಲಗಳನ್ನು ಸೃಷ್ಟಿಸುವುದು, ರಾಜಕೀಯ ಮಾಡುವುದು ಬೇಡ ಎಂದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button