*ಬಂಗಾಳ ಸಿಎಂ ಅಭ್ಯರ್ಥಿ ಸುವೇಂದು ಅಧಿಕಾರಿ ಆಪ್ತನ ಗುಂಡಿಕ್ಕಿ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಅಭ್ಯರ್ಥಿ ಎನ್ನಲಾದ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಒಕೆ
ಬುಧವಾರ ರಾತ್ರಿ ಸುಮಾರು 10.20ಕ್ಕೆ ಚಂದ್ರನಾಥ್ ರಥ್ ಅವರು ಬಾರಾಸಾತ್‌ನಲ್ಲಿರುವ ತಮ್ಮ ಮನೆಗೆ ಕಾರಿನಲ್ಲಿ ಮರಳುತ್ತಿದ್ದರು. ದೋಹಾರಿಯಾ ಪ್ರದೇಶದಲ್ಲಿ ಬೈಕ್ ಮೇಲೆ ಬಂದ ಅಪರಿಚಿತರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ.
ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




