Belagavi NewsBelgaum NewsKarnataka NewsLatestPolitics
*ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ*

ಮೂರು ಒಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.
ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ಡಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ವರ್ಚುವಲ್ ಮೂಲಕ ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಇನ್ನೂ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೂ ಹಸಿರು ನಿಶಾನೆ ತೋರಿದ್ದಾರೆ.
ಈ ವೇಳೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ,.ಶಿವಕುಮಾರ್, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.