
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಬಸ್ ನಿಲ್ದಾಣವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಬಸ್ ನಿಲ್ದಾಣಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಸ್ ನಿಲ್ದಾಣವನ್ನು ಸಂಪೂರ್ಣ ತಪಾಸಣೆ ನಡೆಸಲಾಗಿದ್ದು, ಬೇರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಬಸ್ ನಿಲ್ದಾಣಕ್ಕೆ ಜಿಲೆಟಿನ್ ಕಡ್ಡಿ ತಂದವರು ಯಾರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.