Kannada NewsKarnataka NewsLatest
*ಕೊಲ್ಲೂರಿಗೆ ಆಗಮಿಸಿ ಮೂಕಾಂಬಿಕಾ ದೇವಿ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ್ದು, ಮೂಕಾಂಬಿಕಾ ದೇವಿ ದರ್ಶನಪಡೆದಿದ್ದಾರೆ.
ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಸಿಎಂ ವಿಜಯ್, ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಕೊಲ್ಲೂರಿಗೆ ತೆರಳಿದರು. ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಸಂಪ್ರದಾಯದಂತೆ ವಿಜಯ್ ಶರ್ಟ್ ಕಳಚಿ, ಶಲ್ಯ ಹೊದ್ದು ದೇವಸ್ಥಾನದ ಒಳಗೆ ಪ್ರವೇಶಿಸಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿಯಿಂದ ಸಿಎಂ ವಿಜಯ್ ಅವರುಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಬಳಿಕ ಮೂಕಾಂಬಿಕಾ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ತಮಿಳುನಾಡು ಸಿಎಂ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾದ ಸುತ್ತ ಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಅಲ್ಲದೇ ಭಕ್ತರಿಗೆ ಹಾಗೂ ಸಾರ್ವಜನಿಕರಿಕೆ ಕೆಲ ಕಾಲ ದೇವಸ್ಥಾನಕ್ಕೆ ನಿರ್ಬಂಧ ವಿಧಿಸಲಾಗಿದೆ.




