Latest
*ಬಜೆಟ್ ಮಂಡನೆಗೂ ಮುನ್ನ ಸಿಎಂ ಬೊಮ್ಮಾಯಿ ದೇವಸ್ಥಾನಗಳ ಭೇಟಿ; ವಿಶೇಷ ಪೂಜೆ*

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ವಿಧಾನಸಭೆಯಲ್ಲಿ ಪ್ರಸಕ್ತಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಚುನಾವಣೆ ಹೊತ್ತಿನಲ್ಲಿ ಸಿಎಂ ಆಯವ್ಯಯದ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ.
ಬಜೆಟ್ ಗೂ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಆರ್.ಟಿ.ನಗರದ ತಮ್ಮ ನಿವಾಸದ ಬಳಿಯಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಶ್ರೀಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಬಾಲಬ್ರೂಯಿ ಗೆಸ್ಟ್ ಹೌಸ್ ಬಳಿಯಿರುವ ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಬೊಮ್ಮಾಯಿ ಅವರಿಗೆ ಸಚಿವ ಭೈರತಿ ಬಸವರಾಜ್, ಶ್ರೀನಿವಾಸ್ ಪೂಜಾರಿ ಸಾಥ್ ನೀಡಿದರು.
ಅಸ್ವಾಭಾವಿಕ ಮರಣ: ಅವಲಂಬಿತರಿಗೆ ತಾತ್ಕಾಲಿಕ ಪರಿಹಾರಕ್ಕೆ ಪೂರಕ ದಾಖಲಾತಿ ಸಲ್ಲಿಸಲು ಸೂಚನೆ




