*ಗುಡುಗು ಸಹಿತ ಧಾರಾಕಾರ ಮಳೆ: ರಾಜಧಾನಿ ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ರಾತ್ರಿಯಾಗುತ್ತಿದ್ದಂತೆ ಬೆಂಗಳೂರು ನಗರದಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಗುಂಡಿಯಮಯ ರಸ್ತೆಗಳು ನದಿಯಂತಾಗಿದ್ದು, ಹಲವೆಡೆ ರಸ್ತೆಗಳು ತುಂಬಿ ಹರಿಯುತ್ತಿವೆ. ಸಂಚಾರ ಅಸ್ತವ್ಯಸ್ಥವಾಗಿದೆ. ಕಚೇರಿ ಕೆಲಸಗಳನ್ನು ಮುಗಿಸಿ ಮನೆಗೆ ವಾಪಾಸ್ ಆಗುವವರು, ನೈಟ್ ಶಿಫ್ಟ್ ಗಳಿಗೆ ಆಫೀಸ್ ಗೆ ತೆರಳುವವರು ಮಳೆ, ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ.
ಮೆಜೆಸ್ಟಿಕ್, ಶಾಂತಿನಗರ, ಜಯನಗರ, ವಿಧಾಅಸೌಧ, ಕಾರ್ಪೊರೇಷ, ಕೆ.ಆರ್. ಮಾರುಕಟ್ಟೆ, ಬಸವನಗುಡಿ, ಜಯನಗರ, ಜೆ.ಪಿನಗರ, ಬನಶಂಕರಿ, ರಿಚ್ಮಂಡ್ ಸರ್ಕಲ್, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರಂ, ಉತ್ತರಹಳ್ಳಿ, ಪದ್ಮನಾಭನಗರ, ಆರ್.ಆರ್.ನಗರ, ಗಿರಿನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಕೆಂಗೇರಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.