Kannada NewsKarnataka NewsLatest

*ಸ್ವಾತಂತ್ರ್ಯದಿನಾಚರಣೆ ದಿನವೇ ರಾಜ್ಯ ರಾಜಧಾನಿಯಲ್ಲಿ ಭೀಕರ ಸ್ಫೋಟ: 8ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ನಡುವೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 10 ಮನೆಗಳು ಧ್ವಂಸಗೊಂಡಿವೆ. 8ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿಲ್ಸನ್ ಗಾರ್ಡನ್ ಬಳಿಯ ಚೆನ್ನಯ್ಯನಪಾಳ್ಯದಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದೆ. ಮನೆಯೊಂದರಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ್ದು, ಮನೆಯ ಗೋಡೆಗಳು, ಅಕ್ಕಪಕ್ಕದ ಮನೆಗಳ ಗೋಡೆಗಳು ಕುಸಿದು ಬಿದ್ದಿವೆ. ಹತ್ತಕ್ಕೂ ಹೆಚ್ಚು ಮನೆಗಳು ಸಂಪೂರ್ಣ ನೆಲಸಮವಾಗಿವೆ. ಯಾವುದೇ ಸಿಲಿಂಡರ್ ಸ್ಫೋಟವಲ್ಲ, ಬೆಂಕಿ ಅನಾಹುತವೂ ಅಲ್ಲ. ಆದರೆ ಯಾವ ಸ್ಫೋಟದಿಂದ ಅವಘಡ ಸಂಭವಿಸಿದೆ ಎಂಬುದು ಯಾರಿಗೂ ತಿಳಿದುಬಂದಿಲ್ಲ.

ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button