Politics

*ಮುಲಾಜಿಲ್ಲದೇ ಒತ್ತುವರಿ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮಳೆ ಅವಾಂತರದಿಂದ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದ್ದ ಬೆಂಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.

ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.

HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ…

ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು.

ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿ ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ.

ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು.

ನೆನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.

ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರ್ ರೈಲ್ವೇ ಬ್ರಿಡ್ಜ್ ನಲ್ಲಿ ಸಾರ್ವಜನಿಕರ ಮತ್ತು ಸ್ಥಳೀಯ ನಿವಾಸಿಗಳ ಜೊತೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು.

ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಮಗ್ರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, 350 ಮೀಟರ್ ಉದ್ದದ ಒಳಚರಂಡಿಯನ್ನು ನಿರ್ಮಿಸಿ ರಾಜಕಾಲುವೆಗೆ ಸಂಪರ್ಕ ಕೊಡಬೇಕು, ರೈಲ್ವೇ ಇಲಾಖೆ 3 ತಿಂಗಳ ಒಳಗೆ ಕಾಮಗಾರಿ ಮುಗಿಸುವ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button