
5.76 ಕೋಟಿ ವಶಕ್ಕೆ
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರುನ ಡೇರಿ ಸರ್ಕಲ್ ಬಳಿ ಎಟಿಎಂಗೆ ಹಣ ತುಂಬಲು ಬಂದಿದ್ದ ವಾಹನ ತಡೆದು ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಬರೋಬ್ಬರಿ 7.11 ಕೋಟಿ ದರೋಡೆ ನಡೆಸಿದ್ದ ಪ್ರಕರಣ ಸಂಬಂಧ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗೋಪಿ ಎಂಬಾತನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಮೂಲಕ ಎಲ್ಲಾ ಆರೋಪಿಗಳ ಬಂಧನವಾಗಿದೆ. 7.11 ಕೋಟಿ ಹಣದಲ್ಲಿ ಈವರೆಗೆ 5 ಕೋಟಿ 76 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




