
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಕೇಶ್ ಬಂಧಿತ ಆರೋಪಿ. ಈತ ದರೋಡೆ ಪ್ರಕರಣದ 7ನೇ ಆರೋಪಿಯಾಗಿದ್ದಾನೆ. ಈತ ದರೋಡೆ ಪ್ರಕರಣದ ಬಂಧಿತ ಆರೋಪಿ ರವಿಯ ಸಹೋದರ ಎಂದು ತಿಳಿದುಬಂದಿದೆ.
ರವಿ ಜೊತೆ ಸೇರಿ ದರೋಡೆಗೆ ಸಂಚು ರೂಪಿಸಿದ್ದ. ತಡರಾತ್ರಿ ರಾಕೇಶ್ ಸಿದ್ದಾಪುರ ಠಾಣೆಗೆ ಬಂದು ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.




