
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಪೊಲೀಸರು ತಮಿಳುನಾಡಿನಲ್ಲಿ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜೆ.ಎಕ್ಸ್. ವಿಯರ್ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಸಿದ್ದಾಪುರ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ಕಾಡುಗೋಡಿ ನಿವಾಸಿಯಾದ ಜೆ.ಎಕ್ಸ್.ವಿಯರ್, ಇನೊವಾ ಕಾರಿನಲ್ಲಿದ್ದ ಹಣದ ಬಾಕ್ಸ್ ಸಮೇತ ವ್ಯಾಗನರ್ ಕಾರಿನಲ್ಲಿ ಪರಾರಿಯಾಗಿದ್ದ. ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಕೇಸ್ ನಲ್ಲಿ ಕಿಂಗ್ ಪಿನ್ ಪೊಲೀಸ್ ಕಾನ್ಸ್ ಟೇಬಲ್ ಅಣ್ಣಪ್ಪ ಹಾಗೂ ಸಿಎಂ ಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. 5.30 ಕೋಟಿ ಹಣ ವಶಪಡಿಸಿಕೊಂಡಿದ್ದು, ಉಳಿದ ಹಣ ಹಾಗೂ ಆರೋಪಿಗಳಿಗಾಗು ಹುಡುಕಾಟ ಮುಂದುವರೆದಿದೆ.



