Kannada NewsKarnataka NewsLatest

*ಶಾಲಾ ಬಸ್ ಭೀಕರ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಚಾಲಕನ ಓವರ್ ಸ್ಪೀಡ್ ನಿಂದಾಗಿ ಶಾಲಾ ಬಸ್ ಭೀಕರ ಅಪಘಾತಕ್ಕೀಡಾಗಿರುವ ಘಟನೆ ಬೆಳ್ಳಂಬೆಳಿಗ್ಗೆ ನಡೆದಿದೆ.

ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ನ್ಯೂ ಆಕ್ಸ್ ಫರ್ಡ್ ಪಬ್ಲಿಕ್ ಸ್ಕೂಲ್ ಬಸ್ ಬೆಂಗಳೂರಿನ ಮಾದನಾಯಕನಹಳ್ಳಿ ಲಕ್ಷ್ಮೀ ಪುರದಲ್ಲಿ ಐಷರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದೆ.

Home add -Advt

ಬಸ್ ನುಜ್ಜುಗುಜ್ಜಾಗಿದೆ. ಬಸ್ ನಲ್ಲಿದ್ದ ಹಲವು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಬೇಜವಾಬ್ದಾರಿಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಬಸ್ ಚಾಲಕ ನಾರಾಯಣನನ್ನು ವಶಕ್ಕೆ ಪಡೆದಿದ್ದಾರೆ.

Related Articles

Back to top button