Kannada NewsKarnataka NewsLatest

*ಮಹಿಳೆಯನ್ನು ಕೊಂದು ಶವವನ್ನು ಮೂಟೆ ಕಟ್ಟಿ ಕಸದ ಲಾರಿಯಲ್ಲಿ ಇಟ್ಟು ಎಸ್ಕೇಪ್*

ಪ್ರಗತಿವಾಹಿನಿ ಸುದ್ದಿ: ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅತ್ಯಾಚಾರವೆಸಗಿ, ಕೊಲೆ ಮಾಡಿ ಬಳಿಕ ಶವವನ್ನು ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

Home add -Advt

ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಸ್ಕೇಟಿಂಗ್ ಗ್ರೌಂಡ್ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಶವವನ್ನು ಮೂಟೆ ಕಟ್ಟಿ ಕಸದ ಲಾರಿಯಲ್ಲಿ ಇಟ್ಟು ಹೋಗಿದ್ದಾರೆ.

ನಿನ್ನೆ ಮಧ್ಯರಾತ್ರಿ ಆಟೋದಲ್ಲಿ ಬಂದಿರುವ ದುಷ್ಕರ್ಮಿಗಳು ಮಹಿಳೆಯ ಶವವನ್ನು ಲಾರಿಯಲ್ಲಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. 30-35 ವರ್ಷದ ಮಹಿಳೆಯಾಗಿದ್ದು, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ತನಿಖೆ ನಡೆಸುತ್ತಿದ್ದಾರೆ.


Related Articles

Back to top button