
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರು ಕಾದ ಕಾವಲಿಯಂತಾಗಿದೆ. ಬಿಸಿಲಿನ ಝಳಕ್ಕೆ ಜನರು ಹೈರಾಣಾಗಾದಿದ್ದು, ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದ್ದು, ಉಷ್ಣಾಲೆ ಬೀಸುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಉಷ್ಣಹವೆಯಿಂದಾಗಿ ಉಸಿರಾಡುವುದೂ ಕಷ್ಟವಾಗುತ್ತಿದೆ. ಈ ಬಾರಿ ಬಿಸಿಗಾಳಿ, ಉಷ್ಣ ಅಲೆ ಪರಿಣಾಮ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಲಿದೆ.
ಉಷ್ಣಾಘಾತಕ್ಕೆ ಸಂಬಂಧಿಸಿದ ಸಾವುಗಳ ಸಂಖ್ಯೆ ಈಬಾರಿ ಹೆಚ್ಚಲಿದೆ ಎಂಬ ಆಘಾತಕಾರಿ ವರದಿ ಬಹಿರಂಗವಾಗಿದೆ. ಉಷ್ಣ ಅಲೆ ತಡೆಗಟ್ಟಲು ದೀರ್ಘಾವದಿಯ ಉಪಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಇಲ್ಲವಾದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ಭಾರತದ ಹಲವು ನಗರಗಳಲ್ಲಿ ಉಷ್ಣ ಅಲೆ ಹೆಚ್ಚಲಿದೆ. ಅದಕ್ಕೆ ತಕ್ಷಣ ಪರುಹಾರ ಕಂಡುಕೊಲ್ಳದಿದ್ದಲ್ಲಿ ತಾಪಮಾನ ಸಂಬಂಧಿತ ಸಾವು-ನೋವು ಹೆಚ್ಚಾಗುತ್ತವೆ ಎಂದು ಕಿಂಗ್ಸ್ ಕಾಲೇಜ್ ಲಂಡನ್, ಹಾರ್ವರ್ಡ್ ವಿಶ್ವವಿದ್ಯಾಲಯ, ಪ್ರಿನ್ಸ್ ಟನ್ ವಿಶ್ವವಿದ್ಯಾಲಯ, ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ, ಬರ್ಕ್ಲಿಯ ವಿಶ್ವವಿದ್ಯಾಲಯ ಅಧ್ಯಯನ ವರದಿ ತಿಳಿಸಿದೆ.