
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಮಾಪನಸೌಧದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಲಂಚಕ್ಕೆ ಬೇಡಿಕೆ, ಫೈಲ್ ಪೆಂಡಿಂಗ್ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ನ್ಯಾ.ಬಿ.ಎಸ್ ಪಾಟೀಲ್ ಹಾಗೂ ಉಪ ಲೋಕಾಯುಕ್ತ ನಾ.ಫಣೀಂದ್ರ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.