Karnataka News

*ವರುಣಾರ್ಭಟಕ್ಕೆ ಕುಸಿದ ಕಾಂಪೌಂಡ್ ಗೋಡೆ: ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅನಾಹುತಗಳು ಸಂಭವಿಸಿದ್ದು, ಕಾಂಪೌಂಡ್ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ.

ವೈಟ್ ಫೀಲ್ಡ್ ನ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗಿದ್ದ ವೇಳೆ ಇಂದು ಬೆಳಿಗ್ಗೆ ಈ ದುರಂತ ಸಂಭವಿಸಿದೆ. ಶಶಿಕಲಾ (35) ಮೃತ ಮಹಿಳೆ. ರಾತ್ರಿ ಸುರಿದ ಮಳೆಗೆ ಗೋಡೆ ನೆನೆದಿದ್ದು, ಏಕಾಏಕಿ ಕುಸಿದು ಬಿದ್ದಿದೆ. ಅವಶೇಷಗಳಡಿ ಸಿಲುಕಿ ಶಶಿಕಲಾ ಮೃತಪಟ್ಟಿದ್ದಾರೆ.

ಬೆಂಗಳೂರಿನಾದ್ಯಂತ ಮತ್ತೆ ಮಳೆ ಅಬ್ಬರ ಜೋರಾಗಿದ್ದು, ಇಂದು ಮಧ್ಯಾಹ್ನದ ಬಳಿಕ ಗುಡುಗು ಸಿಡಿಲಬ್ಬರದ ಮಳೆ ಆರಂಭವಾಗಿದೆ. ಬೆಂಗಳೂರು ಮತ್ತೆ ಜಲಾವೃತಗೊಂಡಿದ್ದು, ಸಾಲು ಸಾಲು ಅವಾಂತರ ಸೃಷ್ಟಿಯಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button