Karnataka NewsSports

*IPL ಕಪ್ ಹಿಡಿದು ಬೆಂಗಳೂರಿಗೆ ಆಗಮಿಸಿದ RCB ತಂಡ: ಆಟಗಾರರಿಗೆ ಅದ್ಧೂರಿ ಸ್ವಾಗತ: ಮುಗಿಲುಮುಟ್ಟಿದ ಅಭಿಮಾನಿಗಳ ಹರ್ಷೋದ್ಘಾರ*

ಪ್ರಗತಿವಾಹಿನಿ ಸುದ್ದಿ: ಬರೋಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕಪ್ ಗೆದ್ದುಕೊಂಡಿದ್ದು, ಕೈಯಲ್ಲಿ ಕಪ್ ಹಿಡಿದು ತಂಡ ಬೆಂಗಳೂರಿಗೆ ಆಗಮಿಸಿದೆ.

ಅಹಮದಾಬಾದ್ ನಿಂದ ವಿಶೇಷ ವಿಮಾನದಲ್ಲಿ ಹೆಚ್ ಎ ಎಲ್ ಏರ್ ಪೋರ್ಟ್ ಗೆ ಬಂದಿಳಿದ ವಿರಾಟ್ ಕೊಹ್ಲಿ ಸೇರಿದಂತೆ ಆರ್ ಸಿಬಿ ತಂಡದ ಆಟಗಾರರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಿದರು.

Related Articles
Home add -Advt

ಹೆಚ್ ಎ ಎಲ್ ಹೊರ ಭಾಗದಲ್ಲಿ ಹಾಗೂ ರಸ್ತೆಯುದ್ಧಕ್ಕೂ ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದು, ಆರ್ ಸಿಬಿ ಆರ್ ಸಿಬಿ ಎಂಬ ಜಯಘೋಷ, ಹರ್ಷೋದ್ಘಾರ ಮುಗಿಲುಮುಟ್ಟಿತ್ತು. ಹೆಚ್ ಎ ಎಲ್ ನಿಂದ ಬಸ್ ಮೂಲಕವಾಗಿ ಆರ್ ಸಿಬಿ ಆಟಗಾರರು ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಆಗಮಿಸಲಿದ್ದು, ಬಳಿಕ ಅಲ್ಲಿಂದ ವಿಧಾನಸೌಧಕ್ಕೆ ತೆರಳಲಿದ್ದಾರೆ. ಅಲ್ಲಿ ಸಂಜೆ ನಾಲ್ಕು ಗಂಟೆಗೆ ಅಭಿನಂದನಾ ಸಮಾರಂಭ ನಡೆಯಲಿದ್ದು, ಆರ್ ಸಿಬಿ ಆಟಗಾರರು ಭಾಗವಹಿಸಲಿದ್ದಾರೆ. ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಕ್ಟರಿ ಪರ‍ೇಡ್ ನಲ್ಲಿ ಭಾಗವಹಿಸಲಿದ್ದಾರೆ.

*ತೆರೆದ ವಾಹನದಲ್ಲಿ RCB ಆಟಗಾರರ ಮೆರವಣಿಗೆ ಇಲ್ಲ: ಗೃಹ ಸಚಿವರ ಮಾಹಿತಿ*


Related Articles

Back to top button