
ಪ್ರಗತಿವಾಹಿನಿ ಸುದ್ದಿ: ಕೆಸದ ಒತ್ತಡದಿಂದ ಮನನೊಂದ ಟೆಕ್ಕಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೋರಮಂಗಲದ ಬಳಿ ನಡೆದಿದೆ.
ನಿಖಿಲ್ ಸೋಮವಂತಿ ಆತ್ಮಹತ್ಯೆಗೆ ಶರಣಾಗಿರುವ ಸಾಫ್ಟ್ ವೇರ್ ಇಂಜಿನಿಯರ್. ಅಗರ ಕೆರೆಯಲ್ಲಿ ನಿಖಿಲ್ ಶವವಾಗಿ ಪತ್ತೆಯಾಗಿದ್ದಾರೆ.
ನಿಖಿಲ್ ಕೋರಮಂಗಲ ಬಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಒತ್ತಡಕ್ಕೆ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದೀಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.