ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಮಿತಿ ಮೀರುತ್ತಿವೆ. ಮಹಿಳೆಯರು ಆತಂಕದಲ್ಲೇ ಬದುವ ಸ್ಥಿತಿ ನಿರ್ಮಾಣವಾಗುತ್ತಿದೆ. ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೆ.ಆರ್.ಮಾರುಕಟ್ಟೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಿಳೆ ಯಲಹಂಕ ತೆರಳಲು ಕೆ.ಆರ್.ಮಾರುಕಟ್ಟೆ ಬಳಿ ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಬಂದ ಇಬ್ಬರು ಅಪರಿಚಿತರು ಮಹಿಳೆಗೆ ದಾರಿ ತೋರಿಸುವುದಾಗಿ ಹೇಳಿ ಗೋಡೌನ್ ಸ್ಟ್ರೀಟ್ ಬಳಿ ಕರೆದೊಯ್ದು ಗ್ಯಾಂಗ್ ರೇಪ್ ನಡೆಸಿದ್ದಾರೆ. ಬಳಿಕ ಮಹಿಳೆ ಬಳಿ ಇದ್ದ ಮೊಬೈಲ್, ಹಣ, ಚಿನ್ನಾಭರನಗಳನ್ನು ದೋಚಿ ಪರಾರಿಯಾಗಿದ್ದಾರೆ.
ಸಂತ್ರಸ್ತ ಮಹಿಳೆ ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗೆ ಸಿಸಿಟಿವಿ ಪರಿಶೀಲಿಸಿರುವ ಪೊಲೀಸರು ಓರ್ವ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ