
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ನಾಲ್ವರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೋರಮಂಗಲದಲ್ಲಿ ಈ ಘಟನೆ ನಡೆದಿದೆ. ಹಳೇ ಪರಿಚಯದ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಭೇಟಿಯಾಗಿದ್ದಾನೆ. ಬಳಿಕ ಹೋಟೆಲ್ ಗೆ ಊಟಕ್ಕೆಂದು ಕರೆದೊಯ್ದಿದ್ದು, ಈ ವೇಳೆ ಆತನ ಮೂವರು ಸ್ನೇಹಿತರು ಸೇರಿಕೊಂಡಿದ್ದಾರೆ. ಬಳಿಕ ಹೋಟೆಲ್ ನ ಟೆರೇಸ್ ಮೇಲೆ ಕರೆದೊಯ್ದು ನಾಲ್ವರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಕೃತ್ಯದ ಬಳಿಕ ಮಹಿಳೆ ಬಳಿ ಇದ್ದ ಮೊಬೈಲ್, ಪರ್ಸ್ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ. ಸಂತ್ರಸ್ತ ಮಹಿಳೆ ಅಲ್ಲಿಂದ ತೆರಳಿ 112 ಸಂಖ್ಯೆಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದರು. ಕೋರಮಂಗಲ ಪೊಲೀಸರು ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ನಾಲ್ವರು ಆರೋಪಿಗಳು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದವರು ಎಂದು ತಿಳಿದುಬಂದಿದೆ.