Kannada NewsKarnataka NewsLatest

*ಬೆಂಗಳೂರು ಏರ್ ಪೋರ್ಟ್ ಗೆ ವಾಮಾಚಾರ….! ಅಧಿಕಾರಿಗಳು, ಸಿಬ್ಬಂದಿಗಳೇ ಶಾಕ್*

ಪ್ರಗತಿವಾಹಿನಿ ಸುದ್ದಿ: ಇಷ್ಟು ದಿನ ರಸ್ತೆ ಬಳಿ, ಕಚೇರಿ, ಆಟದ ಮೈದಾನ, ಹೋಟೆಲ್ ಗಳಲ್ಲಿ ವಾಮಾಚಾರ ನಡೆದಿರುವ ಬಗ್ಗೆ ಸುದ್ದಿ ನೋಡುತ್ತಿದ್ದೆವು. ಆದರೆ ಈಗ ಪ್ರತಿದಿನ ಲಕ್ಷಾಂಅರ ಜನರು ಓಡಾಡುವ ಸ್ಥಳ ಬೆಂಗಳೂರ್ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಮಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ದೇವನಹಳ್ಳಿಯಲ್ಲಿರುವ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಮಾಚಾರದ ಪಾರ್ಸೆಲ್ ಪತ್ತೆಯಾಗಿದೆ. ಏರ್ ಪೋರ್ಟ್ ನ ಅಂಚೆ ಕಚೇರಿಗೆ ವಾಮಾಚಾರದ ಬಾಕ್ಸ್ ಪಾಸೆಲ್ ಬಂದಿದೆ.

ಅದನ್ನು ತೆರೆದ ಅದ್ಜಿಕಾರಿಗಳು ಹಾಗೂ ಸಿಬ್ಬಂದಿಗಲೇ ಶಾಕ್ ಆಗಿದ್ದಾರೆ. ಪಾರ್ಸೆಲ್ ಒಳಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ಫೋಟೋಗಳನ್ನು ಇಟ್ಟು, ಅದರ ಸುತ್ತಲೂ ಕೊಳೆತ ಟೊಮ್ಯಾಟೋ ಹಾಗೂ ಹೂವಿನ ಹಾರವನ್ನು ಹಾಕಲಾಗಿತ್ತು. ಅಲ್ಲದೆ ಹಾರದ ಮೇಲೆ ಕಬ್ಬಿಣದ ತುಂಡು ಹಾಗೂ ಟೂತ್‌ಪೇಸ್ಟ್ ಇಟ್ಟು ಪೂಜೆ ಮಾಡಿದ ರೀತಿಯಲ್ಲಿ ವಸ್ತುಗಳನ್ನು ಜೋಡಿಸಿ ಪಾರ್ಸೆಲ್ ಮಾಡಿರುವುದು ಕಂಡುಬಂದಿದೆ.

ಆರೋಪಿಯು ಜನವರಿ 6ರಿಂದ 22ರ ನಡುವೆ ವಿಮಾನ ನಿಲ್ದಾಣದ ವಿವಿಧೆಡೆ ಓಡಾಡಿ, ಆಡಳಿತ ಮಂಡಳಿ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ಬಂದ ಪಾರ್ಸೆಲ್ ಕಳುಹಿಸಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕೆಐಎಬಿ ಸಿಬ್ಬಂದಿ ಕೆಲಸಕ್ಕೆ ಬಲು ಹೆದರುತ್ತಿದ್ದಾರೆ. ಪಾರ್ಸಲ್ ಕಳುಹಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಕೆಂಪೇಗಡ ಏರ್​ಪೋರ್ಟ್​ ಪೊಲೀಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button