*ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 6ಕ್ಕೇರಿಕೆ: ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ನಡುವೆ ಪ್ರಕರಣ ಸಂಬಂಧ ಕಟ್ಟಡದ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ನಿನ್ನೆ ಸಂಜೆ ಸುರಿದ ಮಳೆಯ ಅಬ್ಬರಕ್ಕೆ ಕುಸಿದು ಬಿದ್ದಿತ್ತು. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿದ್ದು, ಈವರೆಗೆ 6 ಕಾರ್ಮಿಕರ ಮೃತದೇಹ ಹೊರತೆಗೆಯಲಾಗಿದೆ. ರಕ್ಷಣಾ ತಂಡದಿಂದ ಕಾರ್ಯಾಚರಣೆ ಮುಂದುವರೆದಿದೆ. ಇದೇ ವೇಳೆ ಕಟ್ಟದ ಮಾಲೀಕ ಭುವನ್ … Continue reading *ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 6ಕ್ಕೇರಿಕೆ: ಇಬ್ಬರ ಬಂಧನ*